ಪ್ರಚಲಿತ

ಪಿಎಫ್‌ಐ ಫಿಕ್ಸ್ ! ಬಿಜೆಪಿಯಲ್ಲಿ ಮುಸ್ಲೀಮರು ಇರುವುದೇ ತಪ್ಪಾ..? ಹತ್ಯೆಯಾದ ಬಿಜೆಪಿ ಮುಖಂಡನ ಸಹೋದರ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಏನು ಗೊತ್ತಾ.?

ರಾಜ್ಯದಲ್ಲಿ ಮೈತ್ರಿ ಸರಕಾರದ ಆಡಳಿತವಿರುವ ಕಾರಣ ಬಿಜೆಪಿ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಯಾವುದೇ ಭದ್ರತೆ ಇಲ್ಲ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿಯಿಂದಾಗಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿತ್ತು. ಹಿಂದೂ ಸಂಘಟನೆಗಳಲ್ಲಿ ಮತ್ತು ಬಿಜೆಪಿಯಲ್ಲಿ ಸಕ್ರೀಯರಾಗಿದ್ದರೆ ಸಾಕು, ಅಂತವರನ್ನು ಟಾರ್ಗೆಟ್ ಮಾಡುತ್ತಿದ್ದ ಕಾಂಗ್ರೆಸ್ ಪ್ರೇರಿತ ಹಂತಕರು ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು. ಇದೀಗ ಮೈತ್ರಿ ಸರಕಾರದಲ್ಲೂ ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ ಮುಂದುವರಿದಿದ್ದು, ನಿನ್ನೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಬಿಜೆಪಿ ಎಂಬ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಇದೀಗ ಘಟನೆಯ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.!

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಪ್ಪಳ್ಳಿ ಅನ್ವರ್‌ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ, ಈವರೆಗೆ ಹಿಂದೂಗಳನ್ನು ಕೊಲ್ಲುತ್ತಿದ್ದ ಹಂತಕರು ಇದೀಗ ಬಿಜೆಪಿಯ ಮುಖಂಡ ಎಂಬ ಕಾರಣಕ್ಕಾಗಿ ಅನ್ವರ್‌ನನ್ನು ಹತ್ಯೆ ಮಾಡಲಾಗಿದೆ. ಆದರೆ ಈ ಬಗ್ಗೆ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ ಚಿಕ್ಕಮಗಳೂರು ಶಾಸಕ ಸಿಟಿ ರವಿ ಅವರು, ಅನ್ವರ್ ಹತ್ಯೆಯನ್ನು ಚಿಕ್ಕಮಗಳೂರು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನೂ ಖಂಡಿಸಬೇಕು ಎಂದು ಹೇಳಿಕೊಂಡಿದ್ದಾರೆ.!

ಎಂಟು ವರ್ಷಗಳ ಹಿಂದೆಯೇ ಸ್ಕೆಚ್ ಹಾಕಿದ್ದ ದುಷ್ಕರ್ಮಿಗಳು..!

ನಿನ್ನೆ ಕೊಲೆಯಾದ ಬಿಜೆಪಿ ಮುಖಂಡ ಅನ್ವರ್‌ನನ್ನು ಹತ್ಯೆ ಮಾಡಲು ಎಂಟು ವರ್ಷಗಳ ಹಿಂದೆಯೇ ಸ್ಕೆಚ್ ಹಾಕಲಾಗಿತ್ತು, ಆದರೆ ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು ನಮ್ಮ ಅಣ್ಣ ಎಂದು ಮೃತ ಅನ್ವರ್ ಅವರ ತಮ್ಮ ಕಬೀರ್ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜವಾಬ್ದಾರಿ ವಹಿಸಿಕೊಂಡ ಅನ್ವರ್‌ಗೆ ತನ್ನ ಸಮುದಾಯದವರಿಂದಲೇ ಬೆದರಿಕೆಗಳು ಬರುತ್ತಿದ್ದವು. ಆದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದ ಕಾರಣ ವಿರೋಧಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇತ್ತು. ಆದ್ದರಿಂದಲೇ ಇದೀಗ ಎಲ್ಲಾ ತಯಾರಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕಬೀರ್, ಹತ್ಯೆಯ ಬಗ್ಗೆ ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಅನ್ವರ್‌ನನ್ನು ಸುಪಾರಿ ಕೊಟ್ಟು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಹೋದರ ಕಬೀರ್, ಈ ಹತ್ಯೆಯ ಹಿಂದಿನ ಕೈಯನ್ನು ಪೊಲೀಸರು ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ.!

ಸಿಎಂ ಕುಮಾರಸ್ವಾಮಿ ಅವರು ತಾನು ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿಕೊಂಡ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಇಡೀ ರಾಜ್ಯದ ಆಡಳಿತ ವ್ಯವಸ್ಥೆ ಎತ್ತ ಸಾಗುತ್ತಿದೆ ಎಂಬೂದು ಅರಿವಾಗುತ್ತದೆ. ಕುಮಾರಸ್ವಾಮಿ ಅವರೂ ಕೂಡ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾದಿಯಲ್ಲೇ ಸಾಗುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗದೇ ಇರಲ್ಲ.!

ಪಿಎಫ್‌ಐ ಕಾರ್ಯಕರ್ತರಿಂದ ಕೊಲೆ..!

ರಾಜ್ಯದಲ್ಲಿ ಈ ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲಿದ್ದ ನೂರಾರು ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದಿದ್ದ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಮುನ್ನುಡಿ ಬರೆದರು. ಅಂದಿನಿಂದ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ನಿರಂತರವಾಗಿ ನಡೆಯುತ್ತಿದೆ. ಇಪ್ಪತ್ತಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಹತ್ಯೆಯಾಗಿದ್ದು, ಪ್ರತಿಯೊಂದರ ಹಿಂದೆಯೂ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಶಾಮೀಲಾಗಿದ್ದರು. ಆದ್ದರಿಂದಲೇ ಈ ಸಂಘಟನೆಯನ್ನು ನಿಷೇಧಿಸಿಬೇಕೆಂಬ ಕೂಗು ಬಹಳ ಜೋರಾಗಿ ಕೇಳಿ ಬರುತ್ತಿತ್ತು. ಆದರೆ ಸಿದ್ದರಾಮಯ್ಯನವರ ಅತಿಯಾದ ಅಲ್ಪಸಂಖ್ಯಾತ ಓಲೈಕೆಯಿಂದಾಗಿ ನಿಷೇಧಿಸಿರಲಿಲ್ಲ. ಆದರೆ ಇದೀಗ ಮತ್ತೆ ಅಟ್ಟಹಾಸ ಮೆರೆದಿರುವ ಪಿಎಫ್‌ಐ ಸಂಘಟನೆ ಮತ್ತೊಬ್ಬ ಬಿಜೆಪಿ ಮುಖಂಡನನ್ನು ಬಲಿ ಪಡೆದುಕೊಂಡಿದ್ದಾರೆ. ಬಿಜೆಪಿಯಲ್ಲಿ ಮುಸ್ಲೀಂ ಕಾರ್ಯಕರ್ತರು ಇರುವುದೇ ತಪ್ಪು ಎಂಬಂತಾಗಿದೆ ಈ ಪಿಎಫ್‌ಐ ಕಾರ್ಯಕರ್ತರ ಮನಸ್ಥಿತಿ.!

ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು..!

ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಆಳಿತದಲ್ಲಿದೆ. ಪೊಲೀಸರ ಮೇಲೆ ಒತ್ತಡ ಬರಬಹುದು, ಆದರೆ ಎಷ್ಟೇ ಕಷ್ಟವಾದರೂ ಕರ್ತವ್ಯ ನಿರ್ವಹಿಸಲೇಬೇಕು ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಕುಮಾರಸ್ವಾಮಿ ಅವರ ಹೇಳಿಕೆಯ ದಿನವೇ ಬಿಜೆಪಿ ಮುಖಂಡನ ಹೆಣ ಬಿದ್ದಿದೆ. ಆದ್ದರಿಂದಲೇ ಆಕ್ರೋಶ ವ್ಯಕ್ತಪಡಿಸಿದ ಶಾಸಕ ಸಿಟಿ ರವಿ ಅವರು, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಕೊಲೆಯ ಬಗ್ಗೆ ಸೂಕ್ತ ತನಿಖೆ ಆಗಲೇಬೇಕು, ಈಗಾಗಲೇ ಯೂಸುಫ್ ಎಂಬಾತನ ವಿರುದ್ಧ ಎಫ್‌ಐ‌ಆರ್ ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಆಗ್ರಹಿಸಿದ್ದಾರೆ.!

ಆದ್ದರಿಂದ ರಾಜ್ಯದಲ್ಲಿ ಮುಂದುವರಿದ ಕೊಲೆ ಭಾಗ್ಯಗಳಿಗೆ ಪೂರ್ಣವಿರಾಮ ಹಾಕಲು ಕುಮಾರಸ್ವಾಮಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಬೆದರಿಕೆಗಳು ಬರುತ್ತಲೇ ಇದ್ದರೂ ಇದರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಆದ್ದರಿಂದಲೇ ರಾಜ್ಯದಲ್ಲಿ ಕೊಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಇನ್ನಾದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದರ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ..!

–ಅರ್ಜುನ್

Tags

Related Articles

Close