ಪ್ರಚಲಿತ

ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಶ ಮಾಡಲು ಹೊರಟಿತ್ತು ಕಾಂಗ್ರೆಸ್: ಪ್ರಧಾನಿ ಮೋದಿ

ವಿರೋಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಸಂವಿಧಾನವನ್ನು ನಾಶಮಾಡಲು ಹೊರಟಿದ್ದಾರೆ ಎಂದು ಆರೋಪ ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದ ಹಾಗೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

ಎನ್.ಡಿ.ಎ. ಸರ್ಕಾರ ದೇಶದ ಸಂವಿಧಾನವನ್ನು ಗೌರವಿಸುತ್ತದೆ. ಡಾ. ಬಿ. ಆರ್. ಅಂಬೇಡ್ಕರ್ ಅವರೇ ಬಂದರೂ ಈ ಪವಿತ್ರ ಗ್ರಂಥವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ಸಂವಿಧಾನವೇ ದೇವರು. ಸಂವಿಧಾನವೇ ‌ಸರ್ವಸ್ವ. ಅದನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಂದು ಬದಲಾವಣೆ ಮಾಡಲು ಹೊರಟರೂ ಅದು ಅಸಾಧ್ಯ. ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆಳೆಯಲು ಬಿಜೆಪಿ ಗೆದ್ದರೆ ಸಂವಿಧಾನಕ್ಕೆ ಅಪಾಯವಿದೆ ಎಂದು ಹೇಳುತ್ತಿರುವ ಬಗ್ಗೆ ವಾಗ್ದಾಳಿ ನಡೆಸಿದ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ, ಸಂವಿಧಾನವನ್ನು ನಾಶ ಮಾಡಲು ಪ್ರಯತ್ನ ನಡೆಸಿದ್ದು ಕಾಂಗ್ರೆಸ್. ಈಗ ಸಂವಿಧಾನದ ಹೆಸರಿನಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕೆ ಮಾಡಲು ಶುರುವಿಟ್ಟುಕೊಂಡಿದೆ. ಆ ಮೂಲಕ ತನ್ನ ತಪ್ಪುಗಳನ್ನು ಮರೆಮಾಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಕಳೆದ ಹಲವು ದಶಕಗಳ ಕಾಲ ಕಾಂಗ್ರೆಸ್ ಆಡಳಿತ ನಡೆಸಿದ್ದರೂ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್, ಈಗ ಬಿಜೆಪಿ ಸರ್ಕಾರದ ಬಳಿ ಅವರಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ಮಾತ್ರವಲ್ಲದೆ, ಅವರಿಗೆ ಪ್ರಶಸ್ತಿಯನ್ನು ನೀಡುವುದಕ್ಕೂ ಬಿಡಲಿಲ್ಲ. ಅಂದು ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಶಗೊಳಿಸಲು ಹೊರಟ‌ ಕಾಂಗ್ರೆಸ್ ಇಂದು ಬಿಜೆಪಿಯನ್ನು ನಿಂದಿಸಲು ಸಂವಿಧಾನದ ಹೆಸರು ತೆಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Tags

Related Articles

Close