ಪ್ರಚಲಿತ

ಕಾಂಗ್ರೆಸ್ ದುರಾಡಳಿತಕ್ಕೆ ಜನತೆ ಆಕ್ರೋಶಗೊಂಡಿದ್ದಾರೆ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ಮಧ್ಯಪ್ರದೇಶ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಇಳಿದಿರುವ ಅವರು, ಕಾಂಗ್ರೆಸ್ ಪಕ್ಷದ ಕರ್ಮಕಾಂಡಗಳಿಂದ ಜನತೆ ಬೇಸತ್ತಿರುವುದರ ಬಗ್ಗೆ ಮಾತನಾಡಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದ ಮೂಲೆ ಮೂಲೆಗೆ ಭೇಟಿ ನೀಡಿದ್ದೇನೆ. ಹಲವು ಜನರನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಈ‌ ಸಂದರ್ಭದಲ್ಲಿ ಬಿಜೆಪಿ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಜನತೆ ಭಾರತೀಯ ಜನತಾ ಪಕ್ಷದ ಮೇಲೆ ಇರಿಸಿರುವ ಪ್ರೀತಿ, ವಿಶ್ವಾಸ, ನಂಬಿಕೆಯೇ ನಮ್ಮ ದೊಡ್ಡ ಆಸ್ತಿ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ, ಎಕ್ಸ್ ಖಾತೆಯಲ್ಲಿಯೂ ಟ್ವೀಟ್ ಮಾಡಿರುವ ಅವರು, ಈ ಚುನಾವಣೆಯಲ್ಲಿ ಸ್ತ್ರೀ ಶಕ್ತಿಯೇ ಮುಂದಾಳತ್ವ ವಹಿಸಿ ಭಾರತೀಯ ಜನತಾ ಪಕ್ಷದ ಪತಾಕೆ ಹಾರಿಸಲಿದೆ. ಮಹಿಳಾ ಸಬಲೀಕರಣ ಬಿಜೆಪಿಯ ಆದ್ಯತೆ ಯಾಗಿದ್ದು, ಮಹಿಳೆಯರು ಸಹ ಬಿಜೆಪಿಯನ್ನು ‌ತಮ್ಮ ಆದ್ಯತಾ ಪಟ್ಟಿಯಲ್ಲಿ ಇರಿಸಿಕೊಂಡಿದ್ದಾರೆ. ನಮ್ಮ ಹೊಸ ತಲೆಮಾರು ಮುಂದಿನ 25 ವರ್ಷಗಳನ್ನು ಮತ್ತು ತಮ್ಮದೇ ಆದ 25 ವರ್ಷಗಳನ್ನು ಒಟ್ಟಿಗೆ ನೋಡಲಿದೆ ಎಂದು ಪ್ರಧಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಯುವಜನರು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಕಾರ್ಯರೂಪಕ್ಕೆ ತರಲು ಹೆಗಲಿಗೆ ಹೆಗಲು ಕೊಟ್ಟು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜನರಿಗೆ ಈ ಶತಮಾನದಲ್ಲಿ ಭಾರತವನ್ನು ಅಭಿವೃದ್ಧಿ ಮಾಡಲು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ನಂಬಿಕೆ ಬಂದಿದೆ. ಈ ಅಚಲ ವಿಶ್ವಾಸದ ಜೊತೆಗೆ ರಾಜ್ಯದ ಜನರು ಡಬಲ್ ಎಂಜಿನ್ ಸರ್ಕಾರವನ್ನು ಎದುರು ನೋಡುತ್ತಿದ್ದಾರೆ. ಅದರ ಅಗತ್ಯತೆ ಜನರಿಗೆ ಅರಿವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ದುರಾಡಳಿತ ಮತ್ತು ವಂಶ ರಾಜಕಾರಣ, ನಕಾರಾತ್ಮಕ ಮನಸ್ಥಿತಿಯ ಬಗ್ಗೆ ರಾಜ್ಯದ ಜನರು ಆಕ್ರೋಶಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಯ ಮಾರ್ಗಸೂಚಿ, ದೂರದೃಷ್ಟಿತ್ವ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಹಾಗಾಗಿ ರಾಜ್ಯದ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿ ಎಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ.

Tags

Related Articles

Close