ಪ್ರಚಲಿತ

ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಮೋದಿ ಹಾಕಿದ ಚಾಲೆಂಜ್ ಏನು ಗೊತ್ತಾ?

ಕಾಂಗ್ರೆಸ್ ಪಕ್ಷ ಮತದ ಆಧಾರದಲ್ಲಿ ಭಾರತಕ್ಕೆ‌ ಸ್ವಾತಂತ್ರ್ಯ ದೊರೆಯುವ ಸಂದರ್ಭದಲ್ಲಿಯೇ ದೇಶವನ್ನು ಒಡೆದು ವಿಭಜನೆ ಮಾಡಿದ ಕುಖ್ಯಾತಿ ಹೊಂದಿರುವ ಪಕ್ಷ.

ಸದ್ಯ ಕಾಂಗ್ರೆಸ್ ದೇಶದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದು, ಆ ಮೂಲಕ ದೇಶವನ್ನು ಮತ್ತೆ ವಿಭಜಿಸುವ ಸಂಚು ನಡೆಸುತ್ತಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂ ಮತ್ತು ಮುಸ್ಲಿಮರ ನಡುವೆ ವಿಷ ಬೀಜ ಬಿತ್ತಿ ಸಾರ್ವಜನಿಕ ವಲಯದಲ್ಲಿ ಅಶಾಂತಿ ಬಿತ್ತುವ ಕೆಲಸ ಮಾಡುತ್ತಿರುವುದು ದುರಂತ.

ದೇಶದಲ್ಲಿ ಲೋಕಸಭಾ ಚುನಾವಣಾ ಹಬ್ಬ ಆರಂಭವಾಗಿದ್ದು, ಕೆಲವು ರಾಜ್ಯಗಳಲ್ಲಿ ಈಗಾಗಲೇ ಚುನಾವಣೆ ಸಹ ನಡೆದಿದೆ. ಈ ಚುನಾವಣೆಯಲ್ಲಿ ಹೇಗಾದರೂ ಪ್ರಧಾನಿ ಮೋದಿ ಪಾಳಯವನ್ನು ಸೋಲಿಸಬೇಕು ಎನ್ನುವ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಪಕ್ಷ ಮುಸ್ಲಿಮ್ ಮೀಸಲಾತಿ ಎನ್ನುವ ಪ್ಲೇ ಕಾರ್ಡ್ ಬಳಸಿ ಮತ ಗಳಿಸುವ ಪ್ರಯತ್ನ ನಡೆಸುತ್ತಿದೆ. ಜೊತೆಗೆ ಜನರ ಸಂಪತ್ತನ್ನು ಪೂರ್ವಜರು ಕೊಟ್ಟು ಹೋದ ಆಸ್ತಿಯ ತೆರಿಗೆಯ ಹೆಸರಿನಲ್ಲಿ ವಸೂಲಿ ಮಾಡುವ ಪ್ರಯತ್ನ ನಡೆಸುತ್ತಿದೆ ಎನ್ನುವ ವಿಷಯವೂ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದು, ಇದು ಜನರಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶಕ್ಕೂ ಕಾರಣವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾಂಗ್ರೆಸ್ ಪಕ್ಷದ ಜಾತಿ ಆಧಾರಿತ ಪ್ಲೇಕಾರ್ಡ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಪಕ್ಷ ಮುಸಲ್ಮಾನರಿಗೆ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತ ಹೇಳಿಕೆ ನೀಡಲಿ ಎಂದು ಚಾಲೆಂಜ್ ಮಾಡಿದ್ದಾರೆ.

ಕಾಂಗ್ರೆಸ್‌ನ ಶೆಹಜಾದಾ ರಾಹುಲ್ ಗಾಂಧಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆೆ ಸಾವಾಲೆಸೆದಿದ್ದು, ಜಾತಿ ಆಧಾರದಲ್ಲಿ ಮೀಸಲಾತಿಯ ದುರುಪಯೋಗ ಮಾಡಿಕೊಳ್ಳುವುದಿಲ್ಲ, ಈ ರೀತಿಯ ತಿದ್ದುಪಡಿಗಳನ್ನು ಸಂವಿಧಾನದಲ್ಲಿ ತರುವುದಿಲ್ಲ, ಜಾತಿ ಆಧಾರದಲ್ಲಿ ಯಾವುದೇ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತವಾಗಿ ಘೋಷಿಸಬೇಕು ಎಂದು ಅವರು ಸವಾಲು ಎಸೆದಿದ್ದಾರೆ.

ಹಾಗೆಯೇ ಕಾಂಗ್ರೆಸ್ ಪಕ್ಷ ಏನೇ ತಿಪ್ಪರಲಾಗ ಹಾಕಲಿ, ನಾನು ಜೀವಂತ ಇರುವ ವರೆಗೂ ಉದ್ಯೋಗ ವಲಯ ಮತ್ತು ಶಿಕ್ಷಣದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

Tags

Related Articles

Close