ಪ್ರಚಲಿತ

ಕಾಂಗ್ರೆಸ್ ಪಕ್ಷಕ್ಕೆ ಬಡವರ ಕಾಳಜಿ ಇಲ್ಲ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಪ್ರತಿಪಕ್ಷಗಳ ಬಣ್ಣವನ್ನು ಸಾರ್ವಜನಿಕರ ಎದುರು ಬೆತ್ತಲು ಮಾಡುತ್ತಿದ್ದಾರೆ.

ಛತ್ತೀಸ್‍ಘಡ್‌ನ ನಕ್ಸಲ್ ಬಾಧಿತ ಪ್ರದೇಶ ಬಸ್ತಾರ್‌ನಿಂದ ಅವರು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ವಿರೋಧ ಪಕ್ಷ ಕಾಂಗ್ರೆಸ್‌ನ ಬಗೆಗೂ ಮಾತನಾಡಿ ರುವ ಅವರು, ಕಾಂಗ್ರೆಸ್ ಪಕ್ಷ ಬಡವರ ಸಮಸ್ಯೆಗಳನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ‌ಎ ಸರ್ಕಾರ ಆಡಳಿತ ನಡೆಸುತ್ತಿದ್ದು, ಈ ಅವಕಾಶವನ್ನು ಒದಗಿಸಿಕೊಟ್ಟ ಜನತೆಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಸರ್ಕಾರವನ್ನು ಬೆಂಬಲಿಸಿದ ಜನರಿಗೆ ಅವರು ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಹಾಗೆಯೇ ಬಸ್ತಾರ್‌ನ ಜನರಿಗೆ ದೇಶದ ಅಭಿವೃದ್ಧಿ ನಡೆಸಲು ಅವಕಾಶ ಮಾಡಿಕೊಟ್ಟ ಕಾರಣಕ್ಕೆ ಧನ್ಯವಾದಗಳನ್ನು ತಿಳಿಸಲು ತಾವು ಇಲ್ಲಿಗೆ ಭೇಟಿ ನೀಡಿರುವುದಾಗಿಯೂ ಅವರು ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ಬಾಧಿಸಿದ್ದ ಸಂದರ್ಭದಲ್ಲಿ ಇಲ್ಲಿನ ಬಡ ಜನರಿಗೆ ಸಿಕ್ಕಿದ ಅನುಕೂಲಗಳನ್ನು, ಎನ್‌ಡಿಎ ಸರ್ಕಾರ ಒದಗಿಸಿ ಕೊಟ್ಟ ಉಚಿತ ಲಸಿಕೆ, ಪಡಿತರಗಳನ್ನು ಕಂಡು ಜನತೆ ಆಶ್ಚರ್ಯ ಚಕಿತರಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ಪಕ್ಷ ದೇಶವನ್ನು ಲೂಟಿ ಮಾಡಲು ಪರವಾನಗಿ ಪಡೆದಿತ್ತು. ಆದರೆ 2014 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಈ ಲೂಟಿಕೋರರ ಪರವಾನಗಿಯನ್ನು ರದ್ದು ಮಾಡಿ, ದೇಶದಲ್ಲಿ ಅಭಿವೃದ್ಧಿಯ ಶಕೆ ಆರಂಭಿಸಿತು ಎಂದು ಅವರು ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳ ನಮ್ಮ ಆಡಳಿತದಲ್ಲಿ ದೇಶ ಅಭಿವೃದ್ಧಿಯ ಹಾದಿಯಲ್ಲಿ ಸಾಗಿ ಎಷ್ಟು ದೂರ ಕ್ರಮಿಸಿದೆ ಎಂದು ನಾವೆಲ್ಲರೂ ನೋಡುತ್ತಿದ್ದೇವೆ. ಈ ದೇಶ ಸಾಧಿಸಿದ ಪ್ರಗತಿ ಮತ್ತು ಅದಕ್ಕಾಗಿ ಭಾರತದ ಜನತೆ ನೀಡಿದ ಬೆಂಬಲಕ್ಕಾಗಿ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನೀವು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ, ದೇಶದ ಅಡಿಪಾಯವನ್ನು ಭದ್ರ ಮಾಡುವ ಕಾರ್ಯ ಮಾಡಿದ್ದೀರಿ ಎಂದೂ ಅವರು ಹೇಳಿದ್ದಾರೆ.

ಭಾರತದಲ್ಲಿ ಸ್ಥಿರ ಮತ್ತು ಬಲಿಷ್ಟ ಆಡಳಿತ ನೀಡುವುದಕ್ಕೆ ಸಂಬಂಧಿಸಿದ ಹಾಗೆ ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತ ಸಾಕ್ಷಿ ಎಂಬಂತೆ ನಿಂತಿದೆ. ನಮ್ಮ ಸರ್ಕಾರದ ಆದ್ಯತೆ ಬಡ ಜನರ ಕಲ್ಯಾಣವಾಗಿದೆ. ಸ್ವಾತಂತ್ರ್ಯ ಸಿಕ್ಕ ಬಳಿಕ ಕಾಂಗ್ರೆಸ್ ಪಕ್ಷ ಈ ದೇಶದ ಬಡ ಜನರ ಅಭಿವೃದ್ಧಿಯನ್ನು ಮೂಲೆ ಗುಂಪು ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬಡ ಜನರ ಮೇಲೆ ಕಾಳಜಿ ಇಲ್ಲ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಸಹ ಕಾಂಗ್ರೆಸ್ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

Tags

Related Articles

Close