X

ಕಮ್ಯೂನಿಸ್ಟರ ಕೋಟೆಯಲ್ಲಿ ಪ್ರಧಾನಿ ಮೋದಿ

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಅಖಾಡಕ್ಕೆ ಇಳಿದಿರುವ ಎನ್‌ಡಿಎ ಅಭ್ಯರ್ಥಿಗಳ ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ದೇಶದೆಲ್ಲೆಡೆ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದ್ದು, ಅದರಂತೆ ಎಲ್ಲಾ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಬಿಜೆಪಿ ಸಹ ತನ್ನ ಅಭ್ಯರ್ಥಿಗಳ ಪರ ದೇಶದೆಲ್ಲೆಡೆ ಪ್ರಚಾರ ಮಾಡುತ್ತಿದೆ. ಕೇರಳದಲ್ಲಿ ಬಿಜೆಪಿ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಪರ ಚುನಾವಣೆಗೆ ಅಭ್ಯರ್ಥಿಗಳಾಗಿ ನಿಂತಿರುವವರ ಪರ ಪ್ರಧಾನಿ ಮೋದಿ ಪ್ರಚಾರ ಮಾಡಿರುವುದಾಗಿದೆ.

ಕೇರಳದ ಪಾಲಕ್ಕಾಡ್, ಮಲಪ್ಪುರಂ ಮತ್ತು ಪೊನ್ನಾನಿಗಳಲ್ಲಿ ಪ್ರಧಾನಿ ದೊಡ್ಡ ಮಟ್ಟದ ರೋಡ್ ಶೋ ನಡೆಸಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕನ್ಯುನಿಸ್ಟರ ಭದ್ರ ಕೋಟೆಯಲ್ಲಿ ತಾವರೆ ಅರಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ರೋಡ್ ಶೋ ನಡೆಸಿ ಪ್ರಚಾರ ನಡೆಸಿರುವುದಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಹ ದೊರೆತಿದೆ.

ಬಿಜೆಪಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪ್ರಧಾನಿಗಳ ಈ ರೋಡ್ ಶೋ‌ಗೆ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ ಅವರ ಮೇಲೆ ಜನರು ಹೂಮಳೆಗೈದರು. ಕಿಲೋಮೀಟರ್ ಗಟ್ಟಲೆ ನಡೆದ ಈ ರೋಡ್ ಶೋ ನಲ್ಲಿ ದಾರಿಯುದ್ದಕ್ಕೂ ಮೋದಿ, ಮೋದಿ ಎಂಬ ಘೋಷಗಳು ಕೇಳಿ ಬಂತು.

ಈ ಪ್ರಚಾರ ಕೋಡ್ ಶೋ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ಬಿಜೆಪಿ ಮತ್ತು ಎನ್.ಡಿ.ಎ‌. ಅಭ್ಯರ್ಥಿಗಳು, ಕಾರ್ಯಕರ್ತರು ಜತೆಯಾದರು‌. ಒಟ್ಟಿನಲ್ಲಿ ಕಮ್ಯೂನಿಸ್ಟ್ ಅಂಗಷದಲ್ಲಿ ಕಮಲ ಕಿಲ‌ಕಿಲ‌ ನಗುವ ಹಾಗೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಪ್ರಯತ್ನ ನಡೆಸುತ್ತಿದ್ದು, ಇದು ಈ ಬಾರಿ ಬಿಜೆಪಿಯ ಸ್ಥಾನ ಕೇರಳದಲ್ಲಿ ಹೆಚ್ಚಾಗುವ ಸಾಧ್ಯತೆಗಳನ್ನೂ ತೋರಿಸುತ್ತಿದೆ ಎನ್ನಬಹುದು.

Post Card Balaga:
Related Post