ಪ್ರಚಲಿತ

ಪ್ರಜ್ವಲ್ ರೇವಣ್ಣ ಪ್ರಕರಣ : ಅಮಿತ್ ಶಾ ಹೀಗೆಂದರಾ?

ಸದ್ಯ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಸಂಸದ ಪ್ರಜ್ವಲ್ ರೇವಣ್ಣ ಆವರ ಸುದ್ದಿ. ಪ್ರಜ್ವಲ್ ಅದೆಷ್ಟೋ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೋ ವಿಷಯಗಳನ್ನು ಇಟ್ಟುಕೊಂಡು, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಮೇಲೆಯೂ ಆರೋಪಿಸುವ ಕೆಲಸವನ್ನು ವಿರೋಧ ಪಕ್ಷಗಳು ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ಪಕ್ಷ ಮಾಡುತ್ತಿದೆ.

ಆ ಮೂಲಕ ಇಂತಹ ಗಂಭೀರ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡು, ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಯಾರೋ ಒಬ್ಬ ಮಾಡಿದ್ದಾನೆ ಎನ್ನಲಾದ ತಪ್ಪನ್ನು ಬಿಜೆಪಿಯವರ ಮೇಲೆ, ಪ್ರಧಾನಿ ಮೋದಿ ಅವರು ಎಲ್ಲಾ ಗೊತ್ತಿದ್ದೂ ಪ್ರಜ್ವಲ್ ರೇವಣ್ಣ ‌ಗೆ ಬೆಂಬಲ‌ ನೀಡಿದ್ದಾರೆ. ಈ ವಿಷಯದಲ್ಲಿ ಮೋದಿ ಸರ್ಕಾರ ಯಾಕೆ ಮೌನವಾಗಿದೆ?. ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ಮೋದಿ ಸರ್ಕಾರ ಮಾಡುತ್ತಿದೆ ಎಂದೆಲ್ಲಾ ತಲೆ ಬುಡ ಇಲ್ಲದೆ ಮಾತನಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ.

ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದು, ಮಹಿಳೆಯರಿಗೆ ಅವನಾನವಾಗುವ ಕೆಲಸವನ್ನು ಬಿಜೆಪಿ ಎಂದಿಗೂ ಸಹಿಸದು. ಇಂತಹ ಕೃತ್ಯ ಎಸಗಿದ್ದೇ ಆದಲ್ಲಿ ತಪ್ಪಿತಸ್ಥರ ವಿರುದ್ಧ ರಾಜ್ಯದ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಪ್ರಕರಣ ಆಘಾತವನ್ನು ಉಂಟುಮಾಡಿದೆ. ಬಿಜೆಪಿಯ ನಿಲುವು ಎಂದಿಗೂ ಮಹಿಳಾ ಪರವಾಗಿಯೇ ಇರುತ್ತದೆ. ನಮ್ಮ ಬೆಂಬಲ ಎಂದಿಗೂ ಮಹಿಳೆಯರಿಗೆ ಎಂದು ಆವರು ತಿಳಿಸಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಕಾರಣವಿಲ್ಲದೆ ಬಿಜೆಪಿಯ ಮೇಲೆ ಆರೋಪ ಮಾಡುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ನಡೆಸುತ್ತಿದೆ. ತಪ್ಪು ಮಾಡಿದವರ ಮೇಲೆ ಅವರೇ ಕಠಿಣ ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ನಮ್ಮ ಮೇಲೆ ಗೂಬೆ ಕೂರಿಸುವುದಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಈ ವರೆಗೂ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಈ ವಿಷಯವನ್ನು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಬೇಕಿತ್ತು‌. ಈ ಕೆಲಸ ಮಾಡದೆ ಅವರು ನಮ್ಮನ್ನು ಪ್ರಶ್ನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಕ್ಷ ಸದಾ ಮಹಿಳಾ ಪರವಾದ ನಿಲುವುಗಳನ್ನೇ ಹೊಂದಿದೆ. ತಪ್ಪು ಮಾಡಿದವರು ದೊಡ್ಡ ಮನುಷ್ಯರೇ ಆಗಿರಲಿ, ಸಾಮನ್ಯರೇ ಆಗಿರಲಿ, ಅವರಿಗೆ ಕಠಿಣ ಶಿಕ್ಷೆ ದೊರೆಯಬೇಕು ಎನ್ನುವುದು ನಮ್ಮ ನಿಲುವು ಎಂದು ಅವರು ತಿಳಿಸಿದ್ದಾರೆ.

Tags

Related Articles

Close