ಪ್ರಚಲಿತ

ಕಾಂಗ್ರೆಸ್‌ನ ಹಿಂದೂ ವಿರೋಧಿ ನಿಲುವಿಗೆ ಪ್ರಲ್ಹಾದ ಜೋಶಿ ಕಿಡಿ

ಅಯೋಧ್ಯೆಯ ಪ್ರಭು ಶ್ರೀರಾಮ ಮಂದಿರದ ವಿಚಾರವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಅವರು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ನೋಡುತ್ತಾ ಬಂದರೆ, ಅದು ಮೊದಲಿನಿಂದಲೂ ತುಷ್ಟೀಕರಣ ರಾಜಕಾರಣವನ್ನು ಮಾಡುತ್ತಲೇ ಬಂದಿದೆ. ಈ ಹಿಂದೆ ಸೋಮನಾಥ ಮಂದಿರದ ಉದ್ಘಾಟನೆಯ ಸಮಯದಲ್ಲಿ ಏನು ಮಾಡಿದ್ದಾರೆ? ಯೋಚಿಸಿ.‌ ಅಂದಿನ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರನ್ನು ಕಾರ್ಯಕ್ರಮಕ್ಕೆ ಹಾಜರಾಗದ ಹಾಗೆ ತಡೆಯಲಾಗಿತ್ತು.‌ ಈಗ ರಾಮ ಮಂದಿರದ ವಿಷಯವನ್ನಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಅವರು ವಾಗ್ದಾಳಿ ‌ನಡೆಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ರಾಮನನ್ನು ಕಾಲ್ಪನಿಕ ಎಂದಿತ್ತು. ಮಂದಿರದ ಕರ ಸೇವಕರ ಮೇಲೆ ಗೋಲಿಬಾರ್ ಮಾಡಿತ್ತು. ರಾಮ ಸೇತುವನ್ನು ‌ಕಾಲ್ಪನಿಕ ಎಂದಿದ್ದರು. ಅದರ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದಿದ್ದರು. ಈಗ ರಾಮ ಮಂದಿರ ಉದ್ಘಾಟನೆಯ ಆಹ್ವಾನ ನಿರಾಕರಣೆ ಮಾಡುತ್ತಿದ್ದಾರೆ. ರಾಮ ಮಂದಿರ ಹೋರಾಟಗಾರರಿಗೆ ಕಾರಣವಿಲ್ಲದೆ ತೊಂದರೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಹಾಗೆಯೇ ಕಾಂಗ್ರೆಸ್ ಬಹಳ ಹಿಂದಿನಿಂದಲೂ ತುಷ್ಟೀಕರಣ ರಾಜಕೀಯ ಮಾಡಿಕೊಂಡೇ ಬರುತ್ತಿದೆ. ಕಾಂಗ್ರೆಸ್ ಇಷ್ಟು ವರ್ಷ ಬಾಂಬ್ ಹಾಕಿ ಗೆದ್ದಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಶ್ರೀ ರಾಮ ಮಂದಿರದ ಬಗ್ಗೆ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದ್ದು, ಬಳಿಕ ಅಯೋಧ್ಯೆಯ ರಾಮ ಮಂದಿರವನ್ನು ಬಿಜೆಪಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹುರುಳಿಲ್ಲದ ವಾದ ಮಂಡನೆ ಮಾಡುತ್ತಿದೆ. ಆ ಮೂಲಕ ತನ್ನ ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿರುವುದು ನಿಜಕ್ಕೂ ನಾಚಿಗೇಡಿನ ವಿಷಯ.

Tags

Related Articles

Close