ಪ್ರಚಲಿತ

ಸಾರ್ವಜನಿಕರ ದಾರಿ ತಪ್ಪಿಸಲು ಕಾಂಗ್ರೆಸ್‌ ಸಂಚು: ಪ್ರಲ್ಹಾದ್ ಜೋಶಿ

ಕೇಂದ್ರದ ಪ್ರಧಾನಿ ಮೋದಿ ಅವರ ಸರ್ಕಾರದ ವಿರುದ್ಧ ವಿ ಪಕ್ಷ ಕಾಂಗ್ರೆಸ್ ಸುಳ್ಳು ಬಿತ್ತುವ ಮೂಲಕ ಸಾರ್ವಜನಿಕರ ದಾರಿ ತಪ್ಪಿಸಲು ಪ್ರಯತ್ನ ನಡೆಸುವುದು ಹಿಂದಿನಿಂದಲೇ ನಡೆದುಕೊಂಡು ಬಂದಿದೆ.‌

ಕೇಂದ್ರ ಸರ್ಕಾರ ಜನರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಸಾರ್ವಜನಿಕರ ಪ್ರೀತಿ, ಅಭಿಮಾನಕ್ಕೆ ಪಾತ್ರವಾಗಿದೆ. ಪ್ರಧಾನಿ ಮೋದಿ ಸರ್ಕಾರ ಜನರಿಗೆ ಹತ್ತಿರವಾಗುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಪಕ್ಷ, ಜನರ ಮನಸ್ಸಿನಲ್ಲಿ ಹೇಗಾದರೂ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಅಪನಂಬಿಕೆ ಮೂಡಿಸಬೇಕು ಎನ್ನುವ ಕಾರಣಕ್ಕೆ ಇನ್ನಿಲ್ಲದ ಸರ್ಕಸ್ ಮಾಡುತ್ತಲೇ ಇರುತ್ತದೆ. ಕೊನೆಗೆ ತಾನು ತೋಡಿದ ಗುಂಡಿಗೆ ತಾನೇ ಬಿದ್ದು ನಗೆಪಾಟಿಲಿಗೀಡಾಗುತ್ತಿದೆ ಎನ್ನುವುದು ಸತ್ಯ.

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಿನಾ‌ಕಾರಣ ಆರೋಪ ಮಾಡಿ, ಜನರನ್ನು ದಾರಿ ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗುಡುಗಿದ್ದಾರೆ.

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಹತ್ತು ವರ್ಷಗಳ ಹಿಂದೆ ಕೇಂದ್ರದಲ್ಲಿ ಆಡಳಿತ‌ ವಹಿಸುತ್ತಿದ್ದ ಯುಪಿಎ ಸರ್ಕಾರ ನೀಡುತ್ತಿದ್ದ ಅನುದಾನಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅನುದಾನವನ್ನು ನೀಡುತ್ತಿದೆ. ಆದರೂ ಅನುದಾನ ಹಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಧೋರಣೆಯನ್ನು ಅನುಸರಿಸುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರು ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೋಲಾರಕ್ಕೆ ‌ಸಂಬಂಧಿಸಿದ ಹಾಗೆ ಐವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ಬಗ್ಗೆ ಮಾತನಾಡುರುವ ಅವರು, ಈ ಘಟನೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿ. ಡಿ ಕೆ ಶಿವಕುಮಾರ್ ಮತ್ತು ಇತರರ ನಡುವೆ ಸಂಘರ್ಷ ಇದೆ. ರಾಜ್ಯದ ಕೈ ಸರ್ಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ತಮ್ಮ ತಪ್ಪು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಎನ್.ಡಿ‌.ಆರ್.ಎಫ್.‌ ನ ಮುಕ್ಕಾಲು ಪ್ರತಿಶತಗಳಷ್ಟು ಅನುದಾನವನ್ನು ನೀಡಲಾಗಿದೆ. ಈ ಹಣವನ್ನು ಈ ವರೆಗೂ ವಿತರಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಿಲ್ಲ. ಬದಲಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಜೋಶಿ ತೋರಿಸಿರುವುದಾಗಿ ಜೋಶಿ ಗುಡುಗಿದ್ದಾರೆ.

Tags

Related Articles

Close