X

ಬಜರಂಗದಳಕ್ಕೆ ಅವಹೇಳನ: ಖರ್ಗೆಗೆ ಸಮನ್ಸ್

ಬಜರಂಗದಳದ ವಿರುದ್ಧ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.

ಕರ್ನಾಟಕದಲ್ಲಿ ಮೊನ್ನೆಯಷ್ಟೇ ವಿಧಾನಸಭಾ ಚುನಾವಣೆ ನಡೆದು, ಫಲಿತಾಂಶ ಸಹ ಬಂದಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಖರ್ಗೆ ಬಜರಂಗದಳದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದಾಖಲಿಸಲಾಗಿದ್ದ ಜೀರಿಗೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿ ಮಾಡಲಾಗಿದೆ. ಈ ಸಂಬಂಧ ಪಂಜಾಬ್ ನ್ಯಾಯಾಲಯದಲ್ಲಿ ಹಿಂದೂ ಸುರಕ್ಷಾ ಪರಿಷತ್ ಬಜರಂಗದಳದ ಹಿಂದ್ ಸಂಸ್ಥಾಪಕ ಹಿತೇಷ್ ಭಾರದ್ವಾಜ್ ಎಂಬವರು ಖರ್ಗೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪಂಜಾಬ್ ಕೋರ್ಟ್ ಖರ್ಗೆಗೆ ಸಮನ್ಸ್ ಜಾರಿಗೊಳಿಸಿದೆ.

ಖರ್ಗೆ ಬಜರಂಗದಳವನ್ನು ದೇಶದ್ರೋಹಿ ಸಂಘಟನೆಗಳ ಜೊತೆಗೆ ಹೋಲಿಕೆ ಮಾಡಿದೆ. ಹಾಗೆಯೇ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಬಜರಂಗದಳವನ್ನು ನಿಷೇಧ ಮಾಡುವುದಾಗಿಯೂ ಪಕ್ಷ ಹೇಳಿಕೆ ನೀಡಿದೆ. ಈ ಹೇಳಿಕೆಯನ್ನು ವಿರೋಧಿಸಿ ಹಿತೇಷ್ ಅವರು ಖರ್ಗೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಖರ್ಗೆ ಅವರಿಗೆ ಈ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಜುಲೈ‌ ೧೦ ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಹೊರಡಿಸಿದೆ.

Post Card Balaga:
Related Post