X

ಸಿದ್ದುಗೆ ಶಾಕ್! ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಕೇಸ್! ಎಫ್.ಐ.ಆರ್ ದಾಖಲಿಸಿದ ಪೊಲೀಸರು! ಬಂಧನದ ಭೀತಿಯಲ್ಲಿ ಸಿದ್ದರಾಮಯ್ಯ..!

೫ ವರ್ಷಗಳ ಕಾಲ ಈ ರಾಜ್ಯವನ್ನು ಆಳಿ, ಗುಡಿಸಿ ಗುಂಡಾಂತರ ಮಾಡಿಬಿಟ್ಠು ನಂತರ ಎಲ್ಲಾ ಅಧಿಕಾರವನ್ನು ಕಳೆದುಕೊಂಡು ಮೈತ್ರಿ ಸರ್ಕಾರಕ್ಕೆ ಮುನ್ನುಡಿ ಹಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ನಾಯಕರ ಹಾಗೂ ಕಾಂಗ್ರೆಸ್ ನಾಯಕರ ಒಳಜಗಳಗಳನ್ನು ನೋಡುತ್ತಾ ಹಾಯಾಗಿ ಧರ್ಮಸ್ಥಳದ ಪ್ರಕೃತಿ ಚಿಕತ್ಸಾಲಯದಲ್ಲಿ ಕಾಲ ಕಳೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೀಗ ಬಿಗ್ ಶಾಕ್ ಒಂದು ಎದುರಾಗಿದೆ.

ತಾನು ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡ ನಂತರ ಈಗಿನ ಮೈತ್ರಿ ಸರ್ಕಾರದ ಗಲಾಟೆಗಳನ್ನು ದೂರದಿಂದಲೇ ನೋಡಿ ಸಂತಸಪಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮಸ್ಥಳದ ಪ್ರಕೃತಿ ಚಿಕಿತ್ಸೆಯ ಮೊರೆ ಹೋಗಿದ್ದರು. ಹತ್ತಿರದಲ್ಲೇ ಇದ್ದರೆ ಸಭೆ ಸಮಾರಂಭಗಳಲ್ಲಿ ಭಾಗವಹಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ದೂರದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಿ ತಮ್ಮ ರಾಜಕೀಯ ದಾಳವನ್ನು ಉರುಳಿಸುತ್ತಿದ್ದಾರೆ.

ಈ ಮಧ್ಯೆ ಅವರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ತಾನು ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಂದರೆ ೨೫ ವರ್ಷದ ಹಿಂದೆ ಅಕ್ರಮ ಎಸೆದಿರುವ ಪ್ರಕರಣ ಇದೀಗ ಮತ್ತೆ ಮರುಜೀವ ಪಡೆದುಕೊಂಡಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಂಧನದ ಭೀತಿ ಎದುರಾಗಿದೆ. ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಿಚಾರಣೆಯನ್ನು ಕೈಗೆತ್ತಿಕೊಂಡ ಮೈಸೂರಿನ ೨ನೇ ಪ್ರಧಾನ ಸತ್ರ ನ್ಯಾಯಾಲಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಎಫ್.ಐ.ಆರ್. ದಾಖಲಿಸಿಕೊಳ್ಳುವಂತೆ ಆದೇಶಿಸಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಒಟ್ಟು ನಾಲ್ಕು ಜನರ ವಿರುದ್ಧ ಒಟ್ಟು ೯ ಕ್ರಿಮಿನಲ್ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಸೆಕ್ಷನ್ ೧೨೦ಬಿ, ೧೯೭, ೧೬೬, ೧೬೭, ೧೬೯, ೨೦೦, ೪೧೭, ೪೦೯, ೪೨೦ ಹಾಗೂ ಐಪಿಸಿ ಸೆಕ್ಷನ್ ೪೬೮ ನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಂಗರಾಜು ಹಾಗೂ ಸಂಗಮೇಶ್ ದೂರು ದಾಖಲಿಸಿದ್ದರು. ಅವರ ದೂರಿನಂತೆ ನ್ಯಾಯಾಲಯ ಎಫ್.ಐ.ಆರ್ ದಾಖಲಿಸಲು ಆದೇಶಿಸಿದ್ದು ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದ್ದಾರೆ. ಇದೀಗ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಂಧನದ ಭೀತಿ ಎದುರಾಗಿದೆ.

source: https://m.dailyhunt.in/news/india/kannada/suvarnanews+tv-epaper-suvarna/vishraantiyalliruva+siddaraamayyage+big+shaak+ef+aiaar+daakhalu-newsid-90758980?ss=pd&s=a

-ಸುನಿಲ್ ಪಣಪಿಲ

Editor Postcard Kannada:
Related Post