ಪ್ರಚಲಿತ

ಬ್ರೇಕಿಂಗ್!! ಹಿಂದೂಗಳ ಹಣವನ್ನು ಅಲ್ಪ ಸಂಖ್ಯಾತರಿಗೆ ನೀಡಿ ಓಟ್ ಬ್ಯಾಂಕ್ ಗಿಟ್ಟಿಸಿದ ಸಿದ್ದರಾಮಯ್ಯ ಬಜೆಟ್!!

ಭಾರೀ ನಿರೀಕ್ಷೆಯಲ್ಲಿದ್ದ ಬಜೆಟ್ ಈ ಬಾರಿಯೂ ವಿಫಲತೆಯನ್ನು ಕಂಡಿದೆ ಅಂತಾನೇ ಹೇಳಬಹುದು…. ವಿತ್ತ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಸಿದ್ದರಾಮಯ್ಯ ಈ ಬಾರಿ ಮುಖ್ಯಮಂತ್ರಿಯಾಗಿ 13ನೇ ಬಜೆಟ್ ಮಂಡನೆ ಮಾಡಿದ್ದು ಈ ಬಾರಿ ಜನರ ನಂಬಿಕೆಯನ್ನು ಹುಸಿ ಮಾಡಿದ್ದಾರೆ… ರಾಜ್ಯ ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯದ ಜನತೆಗೆ ಒಳ್ಳೆಯ ರೀತಿಯಲ್ಲಿ ಬಜೆಟ್ ಮಂಡಣೆಯಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದರೆ ಇಡೀ ಜನತೆಗೆ ಸಿದ್ದರಾಮಯ್ಯ ಸರಕಾರ ನಿರಾಸೆಯನ್ನುಂಟು ಮಾಡಿದ್ದಾರೆ…

ಆದರೆ ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಸರಕಾರ ಜಜೆಟ್ ಮಂಡಿಸಿದ್ದು ಎಲ್ಲಾ ಕ್ಷೇತ್ರಕ್ಕೂ ಗಣನೀಯ ಕೊಡುಗೆಯನ್ನು ನೀಡಿದ್ದು… ನಿರೀಕ್ಷೆಗೂ ಮೀರಿ ಬಜೆಟ್ ಅನ್ನು ಮಂಡಿಸಿದ್ದರು.. ಇದರಿಂದ ಇಡೀ ಜನತೆ ಮೋದಿ ಸರಕಾರವನ್ನು ಕೊಂಡಾಡಿತ್ತು… ಆದರೆ ಈ ಬಾರಿ ಸಿದ್ದರಾಮಯ್ಯ ಸರಕಾರ ಬಜೆಟ್ ಕೇಳುತ್ತಿದ್ದಂತೆಯೇ ಜನರು ಛೀಮಾರಿ ಹಾಕಿದ್ದೇ ಜಾಸ್ತಿ!! ಯಾಕೆಂದರೆ ಜನರಿಗೆ ಉಪಯುಕ್ತವಾಗುವಂತಹ ಯಾವುದೇ ಬಜೆಟ್ ಇದಾಗಿರಲಿಲ್ಲ!!… ರಾಜ್ಯದ ಜನತೆಯ ಉದ್ಧಾರಕ್ಕೆ ಅಥವಾ ದೇಶದ ಉದ್ಧಾರಕ್ಕಾಗಿ ಸಿದ್ದರಾಮಯ್ಯ ಸರಕಾರ ಯಾವುದೇ ಜಜೆಟ್ ಮಂಡಿಸುತ್ತಿಲ್ಲ ಎಂಬುವುದು ಸ್ಪಷ್ಟನೆಯಾಯಿತು..

ಬರೀ ಬಜೆಟ್‍ನಲ್ಲಿ ಅಲ್ಪ ಸಂಖ್ಯಾತರಿಗೆ ಹೆಚ್ಚಿನ ಒಲವು ತೋರಿಸಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ… ಮತ ಓಲೈಕೆಗಾಗಿ ಕೇವಲ ಮುಸ್ಲಿಮ್ ಮತ್ತು ಕ್ರೈಸ್ತರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ….

ಅಲ್ಪಸಂಖ್ಯಾತರಿಗೆ ಭಾರೀ ಗಿಫ್ಟ್…

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಪರ ಅಧಿಕಾರ ನಡೆಸುವುದು ಹೊಸತಲ್ಲ. ಈ ಬಾರಿಯೂ ಅಲ್ಪಸಂಖ್ಯಾತರ ಓಲೈಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಮದರಾಸಗಳಿಗೆ 15 ಕೋಟಿ ನೀಡಿ ದೇವಸ್ಥಾನಕ್ಕೆ ಪಂಗನಾಮವನ್ನು ಹಾಕಿದ್ದಾರೆ. ನಯಾ ಪೈಸೆಯೂ ಬಾರದ ಮದರಾಸಗಳಿಗೆ ಬರೋಬ್ಬರಿ 15 ಕೋಟಿ ರೂಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ತುಷ್ಟೀಕರಣ ರಾಜಕೀಯ ಮಾಡಲು ಮುಂದಾಗಿದ್ದಾರೆ. ಮಾತ್ರವಲ್ಲದೆ ಅಲ್ಪಸಂಖ್ಯಾತರ ಇಲಾಖೆಗೆ 2281 ಕೋಟಿಯನ್ನು ಮೀಸಲಿಟ್ಟಿದ್ದಾರೆ. ಹಾಗೂ ಕ್ರೈಸ್ತ ಸಮುದಾಯಕ್ಕೆ 200 ಕೋಟಿ ರೂಗಳಷ್ಟು ಮೀಸಲಿಟ್ಟಿದ್ದಾರೆ.

2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ 2,281 ಕೋಟಿ ರೂ. ಮೀಸಲಿಡಲಾಗಿದೆ. ಹಾಗಾದರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೇಳಲಾದ ಹೊಸ ಯೋಜನೆಗಳ ಸಂಪೂರ್ಣ ವಿವರ ಇಲ್ಲಿದೆ..

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪೆÇ್ರೀತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು 30 ಕೋಟಿ ರೂ.ಗಳ ಮೊತ್ತದಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುವುದು.

* ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್ ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಲಾಗುವುದು.

* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ ಹಾಗೂ ಅತ್ಯುತ್ತಮ ಫಲಿತಾಂಶ ಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು.

* ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ 15 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

* ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪರಿಷತ್ತಿನ ಕಾರ್ಪಸ್ ಫಂಡ್‍ಗೆ 2018-19ನೇ ಸಾಲಿನಲ್ಲಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.

*25 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸುವುದು. ಎಲ್ಲಾ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಲಾಗುವುದು. ಐದು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು.

* ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ತ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ ನೀಡಲಾಗುವುದು.

* ನದಾಫ್/ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.ಗಳನ್ನು ಮತ್ತು ದಿ ಬ್ಯಾರಿ ವೆಲ್‍ಫೇರ್ ಅಸೋಸಿಯೇಷನ್‍ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

* ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.ಗಳ ಅನುದಾನ ನೀಡಲಾಗುವುದು.

* ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿರುವ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸಿ.ಇ.ಟಿ., NEET ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು.

* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು JEE, NEET, GATE, GMAT ಉಚಿತವಾಗಿ  ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

* ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದ ಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು 800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.

ಒಟ್ಟಾಗಿ ಈ ಬಜೆಟ್ ಅನ್ನು ಗಮನಿಸಿದಾಗ ಈ ಸಿದ್ದರಾಮಯ್ಯ ಸರಕಾರ ಕೇವಲ ಅಲ್ಪಸಂಖ್ಯಾತರ ಉದ್ಧಾರಕ್ಕೇಂದೇ ಮಾಡಿದ ಬಜೆಟ್‍ನಂತಿದೆ….ರೈತರ ಸಾಲಮನ್ನಾ ವಿಷಯದಲ್ಲೂ ರೈತರಿಗೆ ಮಹಾ ಮೋಸವಾಗಿದ್ದು ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹುಸಂಖ್ಯಾತರ ಹಾಗೂ ರಾಜ್ಯದ ಕೋಟ್ಯಾಂತರ ರೈತರ ಭಾವನೆಗಳಿಗೆ ಕೊಡಲಿಯೇಟು ನೀಡಿದ್ದು, ದಲಿತರ ಹಾಗೂ ಅಲ್ಪ ಸಂಖ್ಯಾತರ ಮತಗಳನ್ನು ಓಲೈಸಲು ಮುಂದಾಗಿದ್ದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪವಿತ್ರ

Tags

Related Articles

Close