X

ಬ್ರೇಕಿಂಗ್! ಕಾಂಗ್ರೆಸ್ ಒತ್ತಡಕ್ಕೆ ಬೇಸತ್ತ ಸಿಎಂ..! ಐದೇ ದಿನಕ್ಕೆ ಮುರಿದುಬೀಳುತ್ತಾ ಅಪವಿತ್ರ ಮೈತ್ರಿ..?!

ಮೈತ್ರಿ ಮಾಡಿಕೊಂಡರು ಕಿರಿಕಿರಿ ಮಾತ್ರ ತಪ್ಪಿದ್ದಲ್ಲ. ಕಾಂಗ್ರೆಸ್ ಜೊತೆ ಕೈಜೋಡಿಸಿಕೊಂಡಿರುವುದಕ್ಕೆ ಇದೀಗ ಪಶ್ಚಾತ್ತಾಪ ಪಡುತ್ತಿದ್ದಾರೆ , ಯಾಕೆಂದರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಇದೀಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೂ ಕೂಡ ಅಧಿಕಾರ ತಮ್ಮ ಕೈಯಲ್ಲೇ ಇರಬೇಕೆಂದು ಪಟ್ಟು ಹಿಡಿದಿದ್ದಾರೆ. ಸರಕಾರದ ಮುಖ್ಯ ಖಾತೆಗಳು ಕಾಂಗ್ರೆಸ್ ಹಿಡಿತದಲ್ಲೇ ಇರಬೇಕು ಮತ್ತು ಸಂಪುಟ ಸಭೆಯ ಸಚಿವ ಸ್ಥಾನವೂ ನೀಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಒತ್ತಡ ಹೇರುತ್ತಿದ್ದಾರೆ. ಡಿಸಿಎಂ ಹುದ್ದೆಯನ್ನು ಈಗಾಗಲೇ ಕಾಂಗ್ರೆಸ್ ತನ್ನದಾಗಿಸಿಕೊಂಡಿದ್ದು, ಇದೀಗ ಅಧಿಕಾರದಲ್ಲೂ ತಮ್ಮದೇ ಮೇಲುಗೈ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇವೆಲ್ಲವನ್ನೂ ಸಹಿಸಲಾರದ ಸಿಎಂ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ಜೊತೆ ಸೇರಿಕೊಂಡಿರುವುದಕ್ಕೆ ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ..!

ಅಧಿಕಾರಿಗಳ ವರ್ಗಾವಣೆಗೂ ಇಲ್ಲ ಸಿಎಂಗೆ ಅಧಿಕಾರ..?!

ಕುಮಾರಸ್ವಾಮಿ ಅವರು ಹೆಸರಿಗೆ ಮಾತ್ರ ಮುಖ್ಯಮಂತ್ರಿ, ಅಧಿಕಾರ ಇರುವುದು ಕಾಂಗ್ರೆಸ್ ಕೈಯಲ್ಲಿ ಎಂಬುದು ರಾಜ್ಯದ ಜನರಲ್ಲಿ ಅನುಮಾನ ಮೂಡಿತ್ತು, ಆದರೆ ಆ ಅನುಮಾನ ಇದೀಗ ನಿಜ ಆದಂತಿದೆ. ಯಾಕೆಂದರೆ ಕುಮಾರಸ್ವಾಮಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಕೂಡ ಒಂದು ಸರಕಾರಿ ಅಧಿಕಾರಿಗಳ ವರ್ಗಾವಣೆ ಮಾಡಲೂ ಕೂಡ ಅಧಿಕಾರ ಇಲ್ಲದಂತಾಗಿದೆ. ಯಾಕೆಂದರೆ ಸರಕಾರದ ಎಲ್ಲಾ ಕೆಲಸಗಳಲ್ಲೂ ಮೂಗು ತೂರಿಸಿಕೊಂಡು ಬರುತ್ತಿರುವ ಕಾಂಗ್ರೆಸ್, ತಮ್ಮ ಒಪ್ಪಿಗೆಯಿಲ್ಲದೆ ಯಾವುದೇ ಕೆಲಸ ಮಾಡುವಂತಿಲ್ಲ ಎಂದು ಹೇಳಿಕೊಂಡಿದ್ದಾರೆ.!

ಇತ್ತ ಕುಮಾರಸ್ವಾಮಿ ಅವರೇ ಹೇಳಿಕೊಂಡಿರುವ ಪ್ರಕಾರ , ನಾನು ರಾಜ್ಯದ ಜನರ ಮುಲಾಜಿನಲ್ಲಿಲ್ಲ , ಕಾಂಗ್ರೆಸ್ ನ ಮುಲಾಜಿನಲ್ಲಿದ್ದೇನೆ ಎಂದು ಹೇಳಿಕೊಂಡಿದ್ದರು. ಆದ್ದರಿಂದ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುವುದು ಸುಲಭದ ಕೆಲಸವಲ್ಲ ಎಂಬುದು ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅರಿವಾಗಿರಬಹುದು.!

ಖಾತೆ ಹಂಚಿಕೆ ಆಗುವವರೆಗೂ ಅಧಿಕಾರಿಗಳ ವರ್ಗಾವಣೆ ಇಲ್ಲ..!

ಈ ಹಿಂದೆ ಕಾಂಗ್ರೆಸ್ ಆಡಳಿತ ಇದ್ದಿದ್ದರಿಂದ ತಮಗೆ ಬೇಕಾದ ರೀತಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ್ದರು. ಆದರೆ ಇದೀಗ ಹೊಸದಾಗಿ ಮುಖ್ಯಮಂತ್ರಿ ಆದ ಕುಮಾರಸ್ವಾಮಿ ಅವರು ಅಧಿಕಾರಿಗಳ ವರ್ಗಾವಣೆ ಮಾಡಲು ತಯಾರಿ ನಡೆಸಿತ್ತು. ಆದರೆ ಅದಕ್ಕೂ ಅಡ್ಡಗಾಲು ಹಾಕಿದ ಕಾಂಗ್ರೆಸ್, ಸರಕಾರದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣವಾಗುವವರೆಗೂ ಯಾವುದೇ ಅಧಿಕಾರಿಗಳ ವರ್ಗಾವಣೆ ಮಾಡದಂತೆ ಒತ್ತಡ ಹೇರಿದೆ.ಇದರಿಂದ ಬೇಸತ್ತ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರಿಗಳ ವರ್ಗಾವಣೆಯ ಅಧಿಕಾರವೂ ತನಗಿಲ್ಲವೇ? ಎಂದು ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದಾರೆ.!

ಒಟ್ಟಾರೆಯಾಗಿ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್‌ ಜೊತೆ ಸೇರಿಕೊಂಡರೆ, ಇತ್ತ ರಾಜ್ಯದ ಜನರೇ ಜೆಡಿಎಸ್‌‌ನ್ನು ಮೂಲೆಗುಂಪು ಮಾಡಿದರೂ ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಇದೀಗ ಎರಡೂ ಪಕ್ಷಗಳ ಆಂತರಿಕ ವಲಯದಲ್ಲಿ ಭಾರೀ ಭಿನ್ನಾಭಿಪ್ರಾಯ ತಲೆದೋರುತ್ತಿದ್ದು ಮುಂದಿನ ಸ್ಥಿತಿ ಯಾವ ರೀತಿ ಮುಂದುವರಿಯುತ್ತದೆ ಎಂಬುದು ಕಾದು ನೋಡಬೇಕಾಗಿದೆ..!

–ಅರ್ಜುನ್

Editor Postcard Kannada:
Related Post