ಪ್ರಚಲಿತ

ದೇಶದಲ್ಲಿ ಮೂರನೇ ಬಾರಿಗೂ ನಮ್ಮದೇ ‌ಸರ್ಕಾರ: ಪ್ರಧಾನಿ ಮೋದಿ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರ ದೇಶದ ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಭಾರತವನ್ನು ಸಶಕ್ತ ರಾಷ್ಟ್ರವನ್ನಾಗಿ ಮಾಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಎರಡು ಬಾರಿಯ ಪ್ರಧಾನಿ ಮೋದಿ ಸರ್ಕಾರದ ಅಧಿಕಾರಾವಧಿ ಮುಗಿದಿದ್ದು, ಇನ್ನೇನು ದೇಶದಲ್ಲಿ ಮುಂದಿನ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರದಿಂದ ಪ್ರಚಾರ ಕಾರ್ಯ ನಡೆಸುತ್ತಿದ್ದು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸತತ ಪ್ರಯತ್ನ ನಡೆಸುತ್ತಿವೆ. ಹೀಗಿದ್ದರೂ, ಈ ಬಾರಿಯೂ ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳ ಒಕ್ಕೂಟ ಎನ್‌ಡಿ‌ಎ ಯೇ ಸರ್ಕಾರ ರಚನೆ ಮಾಡಲಿದೆ ಎನ್ನುವ ಮಾತುಗಳು ಸಹ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇನ್ನು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಮುಂದಿನ ಬಾರಿಯ ಚುನಾವಣೆಯಲ್ಲೂ ಬಿಜೆಪಿ ಬಹುಮತ ಗಳಿಸಿ, ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತದೆ ಎನ್ನುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಸತತ ಎರಡು ಅವಧಿಗೆ ದೇಶವನ್ನು ಬಲಪಡಿಸಲು ಬಹುಮತವನ್ನು ಬಳಕೆ ಮಾಡಿತು. ಆದರೆ ಅದಕ್ಕೂ ಮೊದಲು ಕಾಂಗ್ರೆಸ್ ಪಕ್ಷ ತನ್ನ ಕುಟುಂಬವನ್ನು ಬಲಪಡಿಸಲು ದಶಕಗಳ ಬಹುಮತವನ್ನು ಬಳಕೆ ಮಾಡಿಕೊಂಡಿತು. ವಿರೋಧ ಪಕ್ಷಗಳು ಸಹ ನಮ್ಮ ಬಿಜೆಪಿ ಪಕ್ಷ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ ಎಂದು ನಂಬುತ್ತವೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿವೆ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡಿವೆ ಎಂದು ಹೇಳುತ್ತಿವೆ. ಇಂತಹ ಪ್ರತಿ ಪಕ್ಷಗಳ ಆರೋಪದ ನಡುವೆಯೂ ನಾವು ಭ್ರಷ್ಟರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಬದ್ಧತೆಯನ್ನು ಪ್ರದರ್ಶನ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿಯೂ ಸಹ ನಮ್ಮ ಸರ್ಕಾರ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದೇವೆ. ತನಿಖಾ ಸಂಸ್ಥೆಗಳ ಕಣ್ಗಾವಲಿನ ಅಡಿಯಲ್ಲಿ ಇರುವ ಜನರ ರಾಜಕೀಯ ಭ್ರಷ್ಟಾಚಾರವನ್ನು ನಾವು ಗುರಿಯಾಗಿಸಿ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕೇವಲ 3% ಗಳಷ್ಟು ಜನರು ಮಾತ್ರವೇ ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾರೆ. ಉಳಿದ 97% ಗಳಷ್ಟು ಪ್ರಕರಣಗಳಲ್ಲಿ ಅಧಿಕಾರಿಗಳು ಮತ್ತು ಅಪರಾಧಿಗಳು ಇರುವುದಾಗಿದೆ. ನಮ್ಮ ಸರ್ಕಾರದ ಕಳೆದ ಹತ್ತು ವವರ್ಷಗಳ ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯೇ ನಮ್ಮ ಪರಮ ಗುರಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Tags

Related Articles

Close