ಪ್ರಚಲಿತ

ರಾಜ್ಯಕ್ಕೆ‌ ಮಾದರಿಯಾಯ್ತು ಕಾಪು ಶಾಸಕರ ಕೆಲಸ: ಮೃತ ಗೋವುಗಳಿಗೂ ಸಿಗಲಿದೆ ಮುಕ್ತಿ!

ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷ ಸ್ಥಾನಮಾನ ಇದೆ. ಗೋವನ್ನು ತಾಯಿ, ದೇವರು ಎಂಬಂತೆ ಪೂಜಿಸುವ ಸಂಸ್ಕೃತಿ ನಮ್ಮದು. ಅಂತಹ ಗೋವುಗಳು ಮರಣ ಹೊಂದಿದಾಗ ಅವುಗಳಿಗೆ ವಿಧಿವತ್ತಾದ ಅಂತಿಮ ನಮನ, ಅಂತ್ಯಕ್ರಿಯೆ ನಡೆಸುವ ನಿಟ್ಟಿನಲ್ಲಿ ಕಾಪು ತಾಲೂಕಿನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದಾರೆ. ಆ ಮೂಲಕ ಇಡೀ ರಾಜ್ಯಕ್ಕೆ, ದೇಶಕ್ಕೆ ಮಾದರಿಯಾಗಿದ್ದಾರೆ.

ಕಾಪು ತಾಲೂಕು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಸಲಾಗಿದ್ದು, ಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಚಾಲನೆ ನೀಡಿದ್ದಾರೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಯೋಜನೆ ಇಂದು ನನಸಾಗುತ್ತಿದೆ. ಆ ಮೂಲಕ ಮಾತೃ ಸಮಾನ ಗೋವಿಗೂ ಗೌರವಯುತ ಅಂತಿಮ ಸಂಸ್ಕಾರ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನಿರಿಸಿದ್ದಾರೆ. ಇದೇ ಮೊದಲ ಬಾರಿಗೆ ಶಾಸಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು, ಚುನಾವಣಾ ಪೂರ್ವದಲ್ಲಿ ತಾವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆಯೇ ನಡೆದು ಕೊಲ್ಲುವ ಮೂಲಕ ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಜಯಂತ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿಲ್ಪಾ ಜಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಕೇಶವ ಮೋಯ್ಲಿ, ಕಾಪು ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕ ಸುಧೀರ್ ಶೆಟ್ಟಿ, ಕಾಪು ಮುಖ್ಯ ಪಶುವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ, ಡಾ. ವಿಜಯ ಕುಮಾರ್, ಕಾಪು ತಾಲ್ಲೂಕು ಪಂಚಾಯತ್ ಸಹಾಯಕ ಅಭಿಯಂತರೆ ಚಂದ್ರಕಲಾ, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮದ ನಿರೂಪಿಸಿದರು.

Tags

Related Articles

Close