ಪ್ರಚಲಿತ

ವೀಕ್ಷಿತ್ ಭಾರತ್ ಸಂಕಲ್ಪ ಯಾತ್ರೆ: ಪ್ರಧಾನಿ ಮೋದಿ ಏನಂದ್ರು ಗೊತ್ತಾ?

ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ದೇಶದ ಮೂಲೆ ಮೂಲೆಯ ಜನರಿಗೂ ಯಾವುದೇ ತೊಡಕಿಲ್ಲದೆ ತಲುಪುವ ಹಾಗೆ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಳೆದ ಒಂಬತ್ತು ವರ್ಷಗಳ ಆಡಳಿತದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿಯ ಆಶಯದ ಯೋಜನೆಗಳು ಜನರ ಬದುಕಿನ ಪಥವನ್ನು ಸಕಾರಾತ್ಮಕವಾಗಿ ಬದಲಾಗುವಂತೆ ಮಾಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಭಾರತದ ಸಾಮಾನ್ಯ ಜನರನ್ನು ಕೇಂದ್ರೀಕರಿಸಿ ರೂಪಿಸಿ, ಜಾರಿಗೆ ತರಲಾದ ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಲು ಮತ್ತು ಯೋಜನೆಗಳಲ್ಲಿ ಇನ್ನೂ ಭಾಗಿಗಳಾಗದವರನ್ನು ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೆ ಮಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗೊಂಡ ವಿಭಿನ್ನ, ವಿನೂತನ ಕಾರ್ಯಕ್ರಮವೇ ವೀಕ್ಷಿತ್ ಭಾರತ್ ಸಂಕಲ್ಪ ಯಾತ್ರೆ.

ಈ ಸಂಕಲ್ಪ ಯಾತ್ರೆಯ ಫಲಾನುಭವಿಗಳ ಜೊತೆಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಕಳೆದ ಹತ್ತು ವರ್ಷಗಳ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಜಾರಿಗೆ ತರಲಾದ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಬಂದ ಧೈರ್ಯ, ತೃಪ್ತಿ ಮತ್ತು ಕನಸುಗಳ ಯಶೋಗಾಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರದ ವೀಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯು ಕೇಂದ್ರ ಸರ್ಕಾರ ಈ ವರೆಗೆ ದೇಶದ ಸಾಮಾನ್ಯ ಜನರನ್ನು ಕೇಂದ್ರೀಕರಿಸಿ ಜಾರಿಗೆ ತಂದ ಯೋಜನೆಗಳು ಅವರನ್ನು ಸರಿಯಾದ ರೀತಿಯಲ್ಲಿ ತಲುಪುತ್ತಿದೆಯೇ? ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ. ಆ ಯಾತ್ರೆಯು ದೂರದ ಸ್ಥಳಗಳನ್ನು ತಲುಪುವುದು ಮಾತ್ರವಲ್ಲದೆ ಜನರೊಂದಿಗೆ ಸಂಪರ್ಕ ಸಾಧಿಸುತ್ತಿರುವುದಾಗಿ ಅವರು ಸಂತಸ ಹಂಚಿಕೊಂಡಿದ್ದಾರೆ.

ಈ ಯಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುತ್ತಿರುವ ಎಲ್ಲಾ ಜನರಿಗೂ ಪ್ರಧಾನಿ ಮೋದಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಯಾತ್ರೆ ಆರಂಭವಾಗಿ ಐವತ್ತು ದಿನಗಳು ಕಳೆದಿವೆ. ದೇಶದ ಲಕ್ಷಗಟ್ಟಲೆ ಹಳ್ಳಿಗಳನ್ನು ತಲುಪುವಲ್ಲಿ ಇದು ಯಶಸ್ವಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಈ ವರೆಗೆ ತೊಡಗಿಸಿಕೊಳ್ಳದೇ ಇರುವ ಜನರು, ಈ ಯೋಜನೆಯ ಲಾಭವನ್ನು ಪಡೆಯುವ ಹಾಗೆ ಮಾಡುವಲ್ಲಿಯೂ ಈ ಯಾತ್ರೆ ಯಶಸ್ಸು ಕಂಡಿದೆ ಎಂದು ಅವರು ತಿಳಿಸಿದ್ದಾರೆ. ಈ ಯಾತ್ರೆ ಆರಂಭವಾದ ಬಳಿಕ ಉಜ್ವಲ ಗ್ಯಾಸ್ ಸೌಲಭ್ಯ ಪಡೆಯಲು ನಾಲ್ಕೂವರೆ ಲಕ್ಷಕ್ಕೂ ಅಧಿಕ ಹೊಸ ಅರ್ಜಿಗಳು ಬಂದಿರುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ ಒಂದು ಕೋಟಿಗೂ ಅಧಿಕ ಆಯುಷ್ಮಾನ್ ಕಾರ್ಡುಗಳನ್ನು ವಿತರಣೆ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಸಹಕಾರ ವಲಯವನ್ನು ದೇಶದ ಗ್ರಾಮೀಣ ಜೀವನದ ಪ್ರಬಲ ಅಂಶವನ್ನಾಗಿ ಮಾಡಲು ಕೇಂದ್ರ ಸರ್ಕಾರ ಎಲ್ಲಾ ರೀತಿಯಿಂದಲೂ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಉಪಕ್ರಮವು ಅನೇಕರ ಬದುಕಿನಲ್ಲಿ ಅಭಿವೃದ್ಧಿ ಸಾಧಿಸುವುದಕ್ಕೆ ಅನುಕೂಲ ಒದಗಿಸಿದೆ ಎಂದೂ ಅವರು ಹೇಳಿದ್ದಾರೆ.

Tags

Related Articles

Close