ಪ್ರಚಲಿತ

ಕೇರಳದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ: ಪ್ರಧಾನಿ ಮೋದಿ

ಕಳೆದ ಎರಡು ಅವಧಿಯ ಎನ್.ಡಿ.ಎ. ಆಡಳಿತ ಅಂದರೆ ಹತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ. ದೇಶ ವಿಶ್ವ ಮಟ್ಟದಲ್ಲಿ ತನ್ನ ಖ್ಯಾತಿಯನ್ನು ಹೆಚ್ಚಿಸಿಕೊಂಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಈ ಬಾರಿಯ ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳೂ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಬಿಜೆಪಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ, ಮುಂದೆ ನಡೆಸಲಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ.

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ದಶಕಗಳಲ್ಲಿ ಬಿಜೆಪಿ ದೇಶದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳು ಕೇವಲ ಟ್ರೈಲರ್ ಎಂದು ಹೇಳಿದ್ದಾರೆ. ಮುಂದಿನ ಅವಧಿಯಲ್ಲಿ ನಾವು ಅಧಿಕಾರ ಪಡೆದಲ್ಲಿ ಇದಕ್ಕಿಂತ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಿದ್ದೇವೆ. ಕೇರಳದ ಅಭಿವೃದ್ಧಿ, ದೇಶದ ಅಭಿವೃದ್ಧಿಯ ಆಶಯದೊಂದಿಗೆ ‌ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ಈ ಚುನಾವಣೆಯಲ್ಲಿಯೂ ಬಿಜೆಪಿ‌ಗೆ ಹೆಚ್ಚಿನ ಬೆಂಬಲ ನೀಡುವಂತೆ ಅವರು ಜನರಲ್ಲಿ ವಿನಂತಿಸಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ತಮ್ಮ ಕುಟುಂಬದ ಸ್ಥಾನಗಳನ್ನು ಉಳಿಸಿಕೊಳ್ಳಲಾಗದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಿದ್ದಾರೆ.

ನಾವು ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿ, ಜನರ ಅಭಿವೃದ್ಧಿಯ ಹಿನ್ನಲೆಯಲ್ಲಿ ಮಾಡಿದ ಪ್ರಗತಿಪರ ಕೆಲಸಗಳು ಕೇವಲ ಟ್ರೈಲರ್. ಮುಂದಿನ ಬಾರಿ ಅಧಿಕಾರ ಸಿಕ್ಕಲ್ಲಿ ಕೇರಳಕ್ಕೆ ಮತ್ತು ದೇಶಕ್ಕಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದೇವೆ. ಹಲವಾರು ಅಭಿವೃದ್ಧಿ ಪರ ಗುರಿಗಳನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಿಯಂತ್ರಣದಲ್ಲಿ ಇರುವ ಕರುವನ್ನೂರಿನ ಸಹಕಾರಿ ಬ್ಯಾಂಕ್‌ನಲ್ಲಿ ನಡೆದ ಬಹು ಕೋಟಿ ಹಗರಣದ ಬಗ್ಗೆ ಮೌನವಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಜನರಿಂದ ಮತ ಕೇಳುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದೇ ಸಂದರ್ಭದಲ್ಲಿ ಈ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಸಿದ್ಧಪಡಿಸಿರುವ ಪ್ರಣಾಳಿಕೆಯನ್ನು ಸಹ ಅವರು ಜನರ ಮುಂದಿರಿಸಿದ್ದಾರೆ. ಮೋದಿ ಕೀ ಗ್ಯಾರಂಟಿ ಹೆಸರಿನಲ್ಲಿರುವ ಈ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಈಡೇರಿಸುವುದೇ ನಮ್ಮ ಮೂರನೇ ಅವಧಿಯ ಸರ್ಕಾರದ ಗುರಿ ಎಂದು ಅವರು ಭರವಸೆ ನೀಡಿದ್ದಾರೆ.

ಈ ಬಾರಿ ಕೇರಳದಲ್ಲಿಯೂ ಬಿಜೆಪಿ ಪರ ಅಲೆ, ಮೋದಿ ಪರ ಅಲೆ ಸ್ವಲ್ಪ ಹೆಚ್ಚಿದ್ದು, ಕೇರಳದಲ್ಲಿ ಬಿಜೆಪಿಯ ಸ್ಥಾನಗಳು ಹೆಚ್ಚುವುದನ್ನೂ ಅಲ್ಲಗಳೆಯುವ ಹಾಗಿಲ್ಲ. ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳು ಕೇರಳದ ಕಮ್ಯುನಿಸ್ಟ್ ಕೋಟೆಯನ್ನು ಬೇಧಿಸಿ ಜನರನ್ನು ತಲುಪಿದೆ‌ ಎನ್ನುವುದು ದೇಶ ಬದಲಾಗಿದೆ, ಯಪವ ಜನರಿಗೆ ಸತ್ಯ ದರ್ಶನ ವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

Tags

Related Articles

Close